ತೀರ್ಥಹಳ್ಳಿ: ಜೆಜೆಎಂ ನಾಮಫಲಕ ಕಾಮಗಾರಿ ಕಳಪೆ ಆರೋಪ!
ತೀರ್ಥಹಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಗುಣಮಟ್ಟದ ಕುರಿತು ಈಗಾಗಲೇ ಹಲವು ಪ್ರಶ್ನೆಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಯೋಜನೆಯ ನಾಮಫಲಕ ಕಾಮಗಾರಿಯ ಕಳಪೆ ಗುಣಮಟ್ಟದ ಕುರಿತು ಆರೋಪಗಳು ಕೇಳಿಬಂದಿವೆ.ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ, ನಾಮಫಲಕ ಕಾಮಗಾರಿಯಲ್ಲಿನ ಲೋಪಗಳ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಈ ವಿಚಾರದಲ್ಲಿ ಕಾಣದ ಕೈಗಳ ಪ್ರಭಾವವಿದೆಯೇ? ಎಂಬ ಅನುಮಾನಗಳೂ ವ್ಯಕ್ತವಾಗುತ್ತಿವೆ.
oಈ ಸಂಬಂಧ ಮುಳುಬಾಗಿಲು ಗ್ರಾಂ ಪಂ ಮಾಜಿ ಸದಸ್ಯರು ಹಾಗೂ ಸಮಾಜ ಸೇವಕರಾದ ಡಾ. ಮಂಜುನಾಥ್ ಶೆಟ್ಟಿ ಅವರು ದಾಖಲೆ ಸಹಿತ ವಿಚಾರಗಳನ್ನು ಮುಂದಿಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಮಗಾರಿಯ ಗುಣಮಟ್ಟ, ವೆಚ್ಚ, ಅನುಷ್ಠಾನದ ವಿಧಾನ ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ಜವಾಬ್ದಾರಿಯ ಕುರಿತು ದಾಖಲೆಗಳ ಆಧಾರದಲ್ಲಿ ಮಾಹಿತಿ ಬಹಿರಂಗಪಡಿಸುವ ಸಾಧ್ಯತೆಯಿದೆ.
ಸರ್ಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಮತ್ತು ಸಾರ್ವಜನಿಕ ಹಣದ ಸದ್ಬಳಕೆ ಖಚಿತಪಡಿಸುವುದು ಸಂಬಂಧಪಟ್ಟ ಇಲಾಖೆಗಳ ಕರ್ತವ್ಯವಾಗಿದೆ. ನಾಮಫಲಕ ಕಾಮಗಾರಿಯಲ್ಲಿ ನಿಜವಾಗಿಯೂ ಲೋಪಗಳಿವೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸ್ಪಷ್ಟನೆ ನೀಡಬೇಕಿದೆ.
What do you feel about this post?
Like
Love
Happy
Haha
Sad
Angry
