ತೀರ್ಥಹಳ್ಳಿ: ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ನವೆಂಬರ್ 2, 2026ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಅವರು ಗುಂಡನ್ನು 12.05 ಮೀಟರ್ ದೂರ ಎಸೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಮಿಥಾಲಿ ಅವರು ತಗಡವಳ್ಳಿಯ ಗೀತಾ ಹಾಗೂ ಶಶಿನಾಥ್ ದಂಪತಿಗಳ ಪುತ್ರಿ. ಇವರು ಶೈಕ್ಷಣಿಕವಾಗಿಯೂ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟಗಳ ಜೊತೆಗೆ ದಸರಾ ಕ್ರೀಡಾಕೂಟಗಳಲ್ಲಿಯೂ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ತಮ್ಮ ಕ್ರೀಡಾ ಸಾಧನೆಯ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ವ್ಯಾಸಂಗ ಮಾಡುತ್ತಿರುವ ಶಾಲೆಗೆ ಕೀರ್ತಿ ತಂದಿರುವ ಮಿಥಾಲಿ ಅವರ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಶುಭ ಹಾರೈಸಿದ್ದಾರೆ.
What do you feel about this post?
Like
Love
Happy
Haha
Sad
Angry