ತೀರ್ಥಹಳ್ಳಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಕಚೇರಿ ಉದ್ಘಾಟನೆ
ತೀರ್ಥಹಳ್ಳಿ: ಪಟ್ಟಣದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 08ರಂದು ಸಂಭ್ರಮದಿಂದ ನಡೆಯಿತು.ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರು ನೂತನ ಕಚೇರಿಯನ್ನು ಉದ್ಘಾಟಿಸಿ ಸಂಘಟನೆಯ ಪದಾಧಿಕಾರಿಗಳಿಗೆ ಹಾಗೂ ಪತ್ರಕರ್ತರಿಗೆ ಶುಭಾಶಯ ಕೋರಿದರು. ಶಾಸಕ ಆರಗ ಜ್ಞಾನೇಂದ್ರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದರು.ಇದೇ ಸಂದರ್ಭದಲ್ಲಿ ತೀರ್ಥಹಳ್ಳಿಯ ಹೆಮ್ಮೆಯ ಉದ್ಯಮಿ ಶಫಿ ಅವರನ್ನು ಸಂಘಟನೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಜೊತೆಗೆ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಸೊಪ್ಪುಗುಡ್ಡೆ ರಾಘವೇಂದ್ರ ಭೇಟಿ ನೀಡಿ ಪತ್ರಕರ್ತರ ಸಂಘಕ್ಕೆ ನೂತನ ಕಚೇರಿಗೆ ಶುಭ ಹಾರೈಸಿದರು
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಹಾಗೂ ಸಹ್ಯಾದ್ರಿ ವಾರ್ತೆ ಪತ್ರಿಕೆಯ ಸಂಪಾದಕರಾದ ಗಣಪತಿ, ಸತ್ಯಶೋಧ ನ್ಯೂಸ್ನ ಅರುಣ್ ಮಂಜುನಾಥ್, ಸುದ್ದಿ ಸಾರಥಿ ನ್ಯೂಸ್ನ ರಾಜೇಶ್ ಮೊಗವೀರ, ಪ್ರತಿಸೂಚಕ ನ್ಯೂಸ್ನ ಪ್ರತೀಕ್, ಎಸ್.ಕೆ. ನ್ಯೂಸ್ನ ಶ್ರೀಕಾಂತ್ ಹಾಗೂ ಛಲಗಾರ ಪತ್ರಿಕೆಯ ವರದಿಗಾರ ತುಪ್ಪದಮನೆ ಶಿವಣ್ಣ ಸೇರಿದಂತೆ ಪತ್ರಕರ್ತರು ಹಾಗೂ ಕುರುವಳ್ಳಿ ನಾಗರಾಜ್, ಪ್ರಮೋದ್ ಪೂಜಾರಿ ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಹಾಗೂ ಪತ್ರಕರ್ತರಿಗೆ ಸಿಹಿ ಮತ್ತು ಹಣ್ಣುಗಳನ್ನು ನೀಡಿ ಆತ್ಮೀಯವಾಗಿ ಸತ್ಕರಿಸಲಾಯಿತು.ಪತ್ರಕರ್ತರ ಸಂಘಟನೆಯ ಚಟುವಟಿಕೆಗಳಿಗೆ ಸ್ವಂತ ಕಚೇರಿಯ ವ್ಯವಸ್ಥೆಯಾಗಿರುವುದು ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಿದಂತಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟರು.

ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಮಾತ್ರವಲ್ಲದೆ, ದಸರಾ ಕ್ರೀಡಾಕೂಟ ಹಾಗೂ ವಿವಿಧ ಮುಕ್ತ ಪಂದ್ಯಾವಳಿಗಳಲ್ಲಿಯೂ ಭಾಗವಹಿಸಿ ಹಲವಾರು ವೈಯಕ್ತಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಈ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ತಾನು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಕೀರ್ತಿ ತಂದಿದ್ದಾಳೆ.ವಿದ್ಯಾರ್ಥಿನಿಯ ಈ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂಬರುವ ರಾಷ್ಟ್ರಮಟ್ಟದ ಖೋ-ಖೋ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

.
ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಮಿಥಾಲಿ ಅವರು ತಗಡವಳ್ಳಿಯ ಗೀತಾ ಹಾಗೂ ಶಶಿನಾಥ್ ದಂಪತಿಗಳ ಪುತ್ರಿ. ಇವರು ಶೈಕ್ಷಣಿಕವಾಗಿಯೂ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟಗಳ ಜೊತೆಗೆ ದಸರಾ ಕ್ರೀಡಾಕೂಟಗಳಲ್ಲಿಯೂ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ತಮ್ಮ ಕ್ರೀಡಾ ಸಾಧನೆಯ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ವ್ಯಾಸಂಗ ಮಾಡುತ್ತಿರುವ ಶಾಲೆಗೆ ಕೀರ್ತಿ ತಂದಿರುವ ಮಿಥಾಲಿ ಅವರ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಶುಭ ಹಾರೈಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿ ಮಧು ಕುಮಾರ್ ಅವರನ್ನು ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಪ್ರಶ್ನಿಸಿದಾಗ, ಕೇವಲ ಎರಡು ಮರಗಳನ್ನು ಕಡಿಯಲು ಮಾತ್ರ ಅನುಮತಿ ನೀಡಿದ್ದು, ಉಳಿದ ಮರಗಳ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ಮುಖಂಡರು, ಅರಣ್ಯ ಇಲಾಖೆಯ ಸಿಬ್ಬಂದಿ ಮೇಲ್ವಿಚಾರಣೆ ಇಲ್ಲದೆ ಇಷ್ಟೊಂದು ಮರಗಳನ್ನು ಕಡಿದು ಸಾಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.ಇದೇ ವೇಳೆ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಅವರನ್ನು ವಿಚಾರಿಸಿದಾಗ, ಮರ ಕಡಿಯುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ಆದೇಶದ ಪ್ರತಿ ತಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಂಚೆ ಇಲಾಖೆಯ ಹಿರಿಯ ಅಧಿಕಾರಿಯೂ ಅಂಚೆ ಇಲಾಖೆಯ ಗಮನಕ್ಕೆ ತರದೆ ಮರಗಳನ್ನು ಕಡಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರಾದ ಕಾಗೋಡು ತಿಮ್ಮಪ್ಪ ಅವರು ಸಾರ್ವಜನಿಕ ಜೀವನದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದು, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ರಾಜ್ಯದ ಸಚಿವರಾಗಿ ಹಾಗೂ ವಿಧಾನಸಭೆಯ ಸಭಾಪತಿಯಾಗಿ ಸೇವೆ ಸಲ್ಲಿಸಿರುವ ಅವರು, ಮಲೆನಾಡಿನ ಜನಜೀವನ ಮತ್ತು ಸಾಮಾಜಿಕ ವಿಚಾರಗಳಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದಾರೆ.2026ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 71 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ₹5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.ನವೆಂಬರ್ 1ರಂದು ನಡೆಯಲಿರುವ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಬೆಂಗಳೂರು: ಉತ್ತರಾಖಂಡ್ನಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಐವರು ಕನ್ನಡಿಗರು ಸೇರಿದಂತೆ ಆರು ಮಂದಿ ದಾರುಣವಾಗಿ ಮೃ*ತಪಟ್ಟಿದ್ದಾರೆ. ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರಿನ ಐವರು ಸ್ನೇಹಿತರು ಹೆಲಿಕಾಪ್ಟರ್ ಪತನದಲ್ಲಿ ಜೀ* ಕಳೆದುಕೊಂಡಿರುವ ಘಟನೆ ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ.