ರಾಷ್ಟ್ರಮಟ್ಟಕ್ಕೆ ವಾಗ್ದೇವಿಯ ಮತ್ತೊಂದು ಕ್ರೀಡಾ ಪ್ರತಿಭೆ ದೀಕ್ಷಾ ಎನ್.!

ತೀರ್ಥಹಳ್ಳಿ : ಬೆಂಗಳೂರಿನ ಸರ್ಜಾಪುರದಲ್ಲಿ ನವೆಂಬರ್ 1 ಮತ್ತು 2ರಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಆಯೋಜಿಸಲಾಗಿದ್ದ 19 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿದ ವಾಗ್ದೇವಿ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಎನ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ಸೊರಬದ ಶ್ರೀಮತಿ ಜಯಮ್ಮ ಹಾಗೂ ಶ್ರೀ ನರೇಂದ್ರ ನಾಯಕ್ ದಂಪತಿಯ ಪುತ್ರಿಯಾದ ದೀಕ್ಷಾ ಶೈಕ್ಷಣಿಕವಾಗಿಯೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ.ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಮಾತ್ರವಲ್ಲದೆ, ದಸರಾ ಕ್ರೀಡಾಕೂಟ ಹಾಗೂ ವಿವಿಧ ಮುಕ್ತ ಪಂದ್ಯಾವಳಿಗಳಲ್ಲಿಯೂ ಭಾಗವಹಿಸಿ ಹಲವಾರು ವೈಯಕ್ತಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಈ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ತಾನು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಕೀರ್ತಿ ತಂದಿದ್ದಾಳೆ.ವಿದ್ಯಾರ್ಥಿನಿಯ ಈ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂಬರುವ ರಾಷ್ಟ್ರಮಟ್ಟದ ಖೋ-ಖೋ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ತೀರ್ಥಹಳ್ಳಿ ಸಮೀಪ ವಾಹನ ಡಿಕ್ಕಿ: ಎರಡು ವರ್ಷದ ಚಿರತೆ ಮರಿ ಸಾ*!

ತೀರ್ಥಹಳ್ಳಿ: ಪಟ್ಟಣದ ಸಮೀಪದ ಬುಕ್ಲಾಪುರದ ಕೌರಿ ಬೈಲ್‌ನಲ್ಲಿ ವಾಹನ ಡಿಕ್ಕಿಯಾಗಿ ಸುಮಾರು ಎರಡು ವರ್ಷ ಪ್ರಾಯದ ಚಿರತೆ ಮರಿ ಮೃ*ಪಟ್ಟಿದೆ.ನವೆಂಬರ್ 6ರ ರಾತ್ರಿ ಚಿರತೆ ಮರಿ ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬಂದ ವಾಹನ ಅಪ್ಪಳಿಸಿದ್ದು, ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃ*ಪಟ್ಟಿದೆ ಎನ್ನಲಾಗಿದೆ.ಘಟನೆಯ ಮಾಹಿತಿ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ವಿದ್ಯುತ್ ಶಾಕ್‌ಗೆ ಕಾಡಾನೆ ಬಲಿ!

ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಲೈನ್ ಅಳವಡಿಕೆ; ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಘಟನೆ.ಶಿವಮೊಗ್ಗ: ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಲೈನ್ ಅಳವಡಿಸಿದ್ದ ಪರಿಣಾಮ ಕಾಡಾನೆ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದೆ ಎನ್ನಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಬೆಳೆ ವಿಮೆಯಲ್ಲಿ ತೀರ್ಥಹಳ್ಳಿ ರೈತರಿಗೆ ಅನ್ಯಾಯ ಆರೋಪ: ಕುಪ್ಪಳ್ಳಿ ಪ್ರಶಾಂತ್ ಅಸಮಾಧಾನ

ತೀರ್ಥಹಳ್ಳಿ: ಬೆಳೆ ವಿಮೆ ಪಾವತಿಯಲ್ಲಿ ತೀರ್ಥಹಳ್ಳಿ ತಾಲೂಕಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಶೇಡ್ಗರು, ಕಟ್ಟೆಹಕ್ಲು, ಹೆದ್ದೂರು ಸೇರಿದಂತೆ ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಅತ್ಯಂತ ಕಡಿಮೆ ಪ್ರಮಾಣದ ವಿಮಾ ಹಣ ಪಾವತಿಸಲಾಗುತ್ತಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕುಪ್ಪಳ್ಳಿ ಪ್ರಶಾಂತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಬೆಳೆ ವಿಮೆ ಪಾವತಿಯಲ್ಲಿ ಮಳೆ ಮಾಪನದ ಲೆಕ್ಕಾಚಾರವನ್ನು ಆಧಾರವಾಗಿಟ್ಟುಕೊಂಡು ಪರಿಹಾರ ನೀಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉತ್ತರಿಸಿದ್ದಾರೆ. ಆದರೆ, ಸರಿಯಾದ ಮಳೆ ಮಾಪನದ ನಿಖರತೆಯನ್ನು ಪರಿಶೀಲಿಸದೆ ವಿಮಾ ಹಣ ನಿಗದಿಪಡಿಸಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂಬುದು ರೈತರ ಅಳಲಾಗಿದೆ.ವಿಮಾ ಕಂಪನಿಯು ತೀರ್ಥಹಳ್ಳಿ ತಾಲೂಕಿಗೆ ಅನ್ಯಾಯ ಮಾಡುತ್ತಿದೆ ಎಂಬ ಆರೋಪದ ಜೊತೆಗೆ, ಈ ವಿಚಾರದಲ್ಲಿ ತೋಟಗಾರಿಕೆ ಇಲಾಖೆ ಮಧ್ಯಸ್ಥಿಕೆ ವಹಿಸುತ್ತಿದ್ದರೂ ರೈತರ ಸಮಸ್ಯೆಗೆ ಸಮರ್ಪಕ ಪರಿಹಾರ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.“ಸಮೀಕ್ಷೆ ಮಾಡಿಲ್ಲ, ಮಳೆ ಮಾಪನ ಸರಿಯಾಗಿಲ್ಲ. ಇದೆಲ್ಲವೂ ರೈತರಿಗೆ ಮೋಸ ಮಾಡುವ ಹುನ್ನಾರ ಎಂಬ ಅನುಮಾನ ಮೂಡುತ್ತಿದೆ. ಈ ವಿಚಾರದಲ್ಲಿ ತೋಟಗಾರಿಕೆ ಇಲಾಖೆ ಮಧ್ಯಸ್ಥಿಕೆ ವಹಿಸುತ್ತಿದೆ. ಆದರೆ,ಈಗಾಗಲೇ ತೋಟಗಾರಿಕೆ ಇಲಾಖೆ ಮುಂದೆ ಪ್ರತಿಭಟನೆ ನೀಡಿದ್ದರೂ ಯಾವುದೇ ಪರಿಹಾರ ದೊರೆತಿಲ್ಲ ಜೊತೆಗೆ ಯಾರನ್ನು ನಂಬಬೇಕು ಎಂಬುದೇ ಯಕ್ಷಪ್ರಶ್ನೆಯಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ಈ ಬಗ್ಗೆ ಸಮಗ್ರ ವರದಿ ಪಡೆದು, ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ಕುಪ್ಪಳ್ಳಿ ಪ್ರಶಾಂತ್ ಮನವಿ ಮಾಡಿದ್ದಾರೆ.

Read More ಬೆಳೆ ವಿಮೆಯಲ್ಲಿ ತೀರ್ಥಹಳ್ಳಿ ರೈತರಿಗೆ ಅನ್ಯಾಯ ಆರೋಪ: ಕುಪ್ಪಳ್ಳಿ ಪ್ರಶಾಂತ್ ಅಸಮಾಧಾನ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ!

ಶಿವಮೊಗ್ಗ: ಮಲೆನಾಡಿನ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸಭಾಪತಿ ಡಾ. ಕಾಗೋಡು ತಿಮ್ಮಪ್ಪ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅಕ್ಟೋಬರ್ 30ರಂದು ಪ್ರಕಟಿಸಿರುವ 71ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕಾಗೋಡು ತಿಮ್ಮಪ್ಪ ಅವರ ಹೆಸರನ್ನು ಸಮಾಜಸೇವೆ ಕ್ಷೇತ್ರದ ಸಾಧಕರ ವಿಭಾಗದಲ್ಲಿ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರಾದ ಕಾಗೋಡು ತಿಮ್ಮಪ್ಪ ಅವರು ಸಾರ್ವಜನಿಕ ಜೀವನದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದು, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ರಾಜ್ಯದ ಸಚಿವರಾಗಿ ಹಾಗೂ ವಿಧಾನಸಭೆಯ ಸಭಾಪತಿಯಾಗಿ ಸೇವೆ ಸಲ್ಲಿಸಿರುವ ಅವರು, ಮಲೆನಾಡಿನ ಜನಜೀವನ ಮತ್ತು ಸಾಮಾಜಿಕ ವಿಚಾರಗಳಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದಾರೆ.2026ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 71 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ₹5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.ನವೆಂಬರ್ 1ರಂದು ನಡೆಯಲಿರುವ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಉಚಿತವಾಗಿ ಎ ಎಂ ಸಿ ವಿತರಣೆ.!

ತೀರ್ಥಹಳ್ಳಿ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ 2026-27ನೇ ಸಾಲಿನ ಎಲೆಚುಕ್ಕೆ ರೋಗ ನಿಯಂತ್ರಣ ಕಾರ್ಯಕ್ರಮದಡಿ ಅಡಿಕೆ ಬೆಳೆಗಾರರಿಗೆ ಅರ್ಕಾ ಮೈಕ್ರೋಬಿಯಲ್ ಕಂನ್ಸಾರ್ಷಿಯಂ (AMC) ಎಂಬ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಉಚಿತವಾಗಿ ವಿತರಿಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

 

ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಗಸೂಚಿಯನ್ವಯ ಪ್ರತಿ ಎಕರೆ ಅಡಿಕೆ ಕ್ಷೇತ್ರಕ್ಕೆ ಗರಿಷ್ಠ ₹600 ಮೌಲ್ಯದ AMC ನೀಡಲಾಗುತ್ತದೆ. ಪ್ರತಿ ಫಲಾನುಭವಿಗೆ ಗರಿಷ್ಠ 5 ಎಕರೆ ಅಡಿಕೆ ಕ್ಷೇತ್ರಕ್ಕೆ, ಅಂದರೆ ಒಟ್ಟು ₹3,000 ಮೌಲ್ಯದವರೆಗೆ ಉಚಿತವಾಗಿ ಪಡೆಯಲು ಅವಕಾಶವಿದೆ.

 

ನ.13ರೊಳಗೆ ಅರ್ಜಿ ಸಲ್ಲಿಸಿ

AMC ಪಡೆಯಲು ಇಚ್ಛಿಸುವ ರೈತರು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 13, 2026ರೊಳಗೆ ತೀರ್ಥಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಜೇಷ್ಠತೆಯ ಆಧಾರದಲ್ಲಿ ಹಾಗೂ ವರ್ಗವಾರು ಲಭ್ಯವಿರುವ ಪ್ರಮಾಣಕ್ಕೆ ಅನುಗುಣವಾಗಿ ರೈತರಿಗೆ AMC ವಿತರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

 

ನಿಗದಿತ ಅರ್ಜಿ ನಮೂನೆ.

 

01-04-2026ರ ನಂತರದ RTC (ಪಹಣಿ). ಇದರಲ್ಲಿ ಅಡಿಕೆ ಬೆಳೆ ನಮೂದಾಗಿರಬೇಕು. ಬೆಳೆ ನಮೂದಾಗದಿದ್ದಲ್ಲಿ ಕಂದಾಯ ಇಲಾಖೆಯಿಂದ ಬೆಳೆ ದೃಢೀಕರಣ ಪತ್ರ ಪಡೆಯಬೇಕು.

 

ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿ.

 

ಬ್ಯಾಂಕ್ ಪಾಸ್‌ಬುಕ್‌ನ ಮುಖಪುಟದ ಜೆರಾಕ್ಸ್ ಪ್ರತಿ.

 

RTC ಜಂಟಿ ಖಾತೆಯಾಗಿದ್ದಲ್ಲಿ ₹100ರ ಬಾಂಡ್ ಪೇಪರ್‌ನಲ್ಲಿ ಒಪ್ಪಿಗೆ ಪತ್ರ ಸಲ್ಲಿಸಬೇಕು. ಇದಕ್ಕೆ ನೋಟರಿ ಕಡ್ಡಾಯ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು RD ಸಂಖ್ಯೆಯಿರುವ ಜಾತಿ ಪ್ರಮಾಣಪತ್ರದ ಜೆರಾಕ್ಸ್ ಪ್ರತಿ ಸಲ್ಲಿಸಬೇಕು.

 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

 

AMC ವಿತರಣೆ ಹಾಗೂ ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಕುಶಾವತಿ, ತೀರ್ಥಹಳ್ಳಿ ಅಥವಾ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

 

ಹೋಬಳಿ

 

ಅಧಿಕಾರಿ ಹೆಸರು

 

ದೂರವಾಣಿ ಸಂಖ್ಯೆ

 

ಕಸಬಾ

 

ದಿನೇಶ್ ಟಿ.ಕೆ.

 

9448751947

 

ಆಗುಂಬೆ

 

ಲಕ್ಷ್ಮೀಕಾಂತ್ ಕೆ.ಎಚ್.

 

9482960857

 

ಅಗ್ರಹಾರ

 

ಲಕ್ಷ್ಮೀಕಾಂತ್ ಕೆ.ಎಚ್.

 

9482960857

 

ಮಂಡಗದ್ದೆ

 

ಮಧುಕರ ಕೆ.ಎಲ್.

 

8296510018

 

ಮುತ್ತೂರು

 

ಕಾವ್ಯ ಜಿ.

 

8277160164

 

ತೀರ್ಥಹಳ್ಳಿ ತಾಲ್ಲೂಕು

 

ಸೋಮಶೇಖರ ಕೆ.

 

9108280642

 

  • ಅಡಿಕೆ ಬೆಳೆಗಾರರು ಈ ಯೋಜನೆಯ ಸದುಪಯೋಗ ಪಡೆದುಕೊಂಡು, ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆ ಕೋರಿದೆ.