ರಾಷ್ಟ್ರಮಟ್ಟಕ್ಕೆ ವಾಗ್ದೇವಿಯ ಮತ್ತೊಂದು ಕ್ರೀಡಾ ಪ್ರತಿಭೆ ದೀಕ್ಷಾ ಎನ್.!
ತೀರ್ಥಹಳ್ಳಿ : ಬೆಂಗಳೂರಿನ ಸರ್ಜಾಪುರದಲ್ಲಿ ನವೆಂಬರ್ 1 ಮತ್ತು 2ರಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಆಯೋಜಿಸಲಾಗಿದ್ದ 19 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿದ ವಾಗ್ದೇವಿ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಎನ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ಸೊರಬದ ಶ್ರೀಮತಿ ಜಯಮ್ಮ ಹಾಗೂ ಶ್ರೀ ನರೇಂದ್ರ ನಾಯಕ್ ದಂಪತಿಯ ಪುತ್ರಿಯಾದ ದೀಕ್ಷಾ ಶೈಕ್ಷಣಿಕವಾಗಿಯೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ.
ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಮಾತ್ರವಲ್ಲದೆ, ದಸರಾ ಕ್ರೀಡಾಕೂಟ ಹಾಗೂ ವಿವಿಧ ಮುಕ್ತ ಪಂದ್ಯಾವಳಿಗಳಲ್ಲಿಯೂ ಭಾಗವಹಿಸಿ ಹಲವಾರು ವೈಯಕ್ತಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಈ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ತಾನು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಕೀರ್ತಿ ತಂದಿದ್ದಾಳೆ.ವಿದ್ಯಾರ್ಥಿನಿಯ ಈ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂಬರುವ ರಾಷ್ಟ್ರಮಟ್ಟದ ಖೋ-ಖೋ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.


.
ಘಟನೆಯ ಮಾಹಿತಿ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಮಿಥಾಲಿ ಅವರು ತಗಡವಳ್ಳಿಯ ಗೀತಾ ಹಾಗೂ ಶಶಿನಾಥ್ ದಂಪತಿಗಳ ಪುತ್ರಿ. ಇವರು ಶೈಕ್ಷಣಿಕವಾಗಿಯೂ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟಗಳ ಜೊತೆಗೆ ದಸರಾ ಕ್ರೀಡಾಕೂಟಗಳಲ್ಲಿಯೂ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.
ತಮ್ಮ ಕ್ರೀಡಾ ಸಾಧನೆಯ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ವ್ಯಾಸಂಗ ಮಾಡುತ್ತಿರುವ ಶಾಲೆಗೆ ಕೀರ್ತಿ ತಂದಿರುವ ಮಿಥಾಲಿ ಅವರ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಶುಭ ಹಾರೈಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರಾದ ಕಾಗೋಡು ತಿಮ್ಮಪ್ಪ ಅವರು ಸಾರ್ವಜನಿಕ ಜೀವನದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದು, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ರಾಜ್ಯದ ಸಚಿವರಾಗಿ ಹಾಗೂ ವಿಧಾನಸಭೆಯ ಸಭಾಪತಿಯಾಗಿ ಸೇವೆ ಸಲ್ಲಿಸಿರುವ ಅವರು, ಮಲೆನಾಡಿನ ಜನಜೀವನ ಮತ್ತು ಸಾಮಾಜಿಕ ವಿಚಾರಗಳಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದಾರೆ.2026ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 71 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ₹5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.ನವೆಂಬರ್ 1ರಂದು ನಡೆಯಲಿರುವ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.