ರಾಷ್ಟ್ರಮಟ್ಟಕ್ಕೆ ವಾಗ್ದೇವಿಯ ಮತ್ತೊಂದು ಕ್ರೀಡಾ ಪ್ರತಿಭೆ ದೀಕ್ಷಾ ಎನ್.!

ತೀರ್ಥಹಳ್ಳಿ : ಬೆಂಗಳೂರಿನ ಸರ್ಜಾಪುರದಲ್ಲಿ ನವೆಂಬರ್ 1 ಮತ್ತು 2ರಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಆಯೋಜಿಸಲಾಗಿದ್ದ 19 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ಅಮೋಘ ಪ್ರದರ್ಶನ ನೀಡಿದ ವಾಗ್ದೇವಿ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಎನ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ಸೊರಬದ ಶ್ರೀಮತಿ ಜಯಮ್ಮ ಹಾಗೂ ಶ್ರೀ ನರೇಂದ್ರ ನಾಯಕ್ ದಂಪತಿಯ ಪುತ್ರಿಯಾದ ದೀಕ್ಷಾ ಶೈಕ್ಷಣಿಕವಾಗಿಯೂ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಾಳೆ.ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಮಾತ್ರವಲ್ಲದೆ, ದಸರಾ ಕ್ರೀಡಾಕೂಟ ಹಾಗೂ ವಿವಿಧ ಮುಕ್ತ ಪಂದ್ಯಾವಳಿಗಳಲ್ಲಿಯೂ ಭಾಗವಹಿಸಿ ಹಲವಾರು ವೈಯಕ್ತಿಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದ್ದಾಳೆ. ಈ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ತಾನು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಕೀರ್ತಿ ತಂದಿದ್ದಾಳೆ.ವಿದ್ಯಾರ್ಥಿನಿಯ ಈ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂಬರುವ ರಾಷ್ಟ್ರಮಟ್ಟದ ಖೋ-ಖೋ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಬ್ಬದ ದಿನವೂ ರಜೆ ಇಲ್ಲವೇ?

ತೀರ್ಥಹಳ್ಳಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹಬ್ಬದ ದಿನಗಳಲ್ಲಿಯೂ ರಜೆ ನೀಡದೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರುವ ಸರ್ಕಾರದ ಕ್ರಮಕ್ಕೆ ಮಂಜುನಾಥ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಅಂಗನವಾಡಿಗಳನ್ನು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತಿಲ್ಲ. ಈ ಅವಧಿಯಲ್ಲಿ ಪೋಷಣ್ ಟ್ರ್ಯಾಕರ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಅಪ್‌ಡೇಟ್ ಮಾಡಬೇಕು. ಕಾರ್ಯಕರ್ತೆ ಹಾಗೂ ಸಹಾಯಕಿಯರು ಮೇಲ್ವಿಚಾರಕರ ಗಮನಕ್ಕೆ ತಂದು, ಒಬ್ಬರು ರಜೆ ಪಡೆದು ಮತ್ತೊಬ್ಬರು ಕರ್ತವ್ಯ ನಿರ್ವಹಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಂಗನವಾಡಿಗಳನ್ನು ಮುಚ್ಚಲು ಅವಕಾಶವಿಲ್ಲ ಎಂದು ಸೂಚಿಸಲಾಗಿದೆ. ಮೇಲ್ವಿಚಾರಕಿಯರು ಹಾಗೂ ಸಿ ಡಿ ಪಿ ಓ ಖುದ್ದಾಗಿ ಅಂಗನವಾಡಿಗಳಿಗೆ ಭೇಟಿ ನೀಡಲಿದ್ದೇವೆ ಎಂಬ ಸೂಚನೆ ನೀಡಲಾಗಿದೆ.ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೂ ಕುಟುಂಬವಿದೆ. ಅವರಿಗೂ ಹಬ್ಬವನ್ನು ಕುಟುಂಬದೊಂದಿಗೆ ಆಚರಿಸುವ ಆಸೆ ಇರುತ್ತದೆ. ಹೀಗಿರುವಾಗ ಹಬ್ಬದ ದಿನಗಳಲ್ಲಿಯೂ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹಬ್ಬದ ದಿನ ರಜೆ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಮಂಜುನಾಥ್ ಶೆಟ್ಟಿ ಮನವಿ ಮಾಡಿದ್ದಾರೆ.

ತೀರ್ಥಹಳ್ಳಿ ಸಮೀಪ ವಾಹನ ಡಿಕ್ಕಿ: ಎರಡು ವರ್ಷದ ಚಿರತೆ ಮರಿ ಸಾ*!

ತೀರ್ಥಹಳ್ಳಿ: ಪಟ್ಟಣದ ಸಮೀಪದ ಬುಕ್ಲಾಪುರದ ಕೌರಿ ಬೈಲ್‌ನಲ್ಲಿ ವಾಹನ ಡಿಕ್ಕಿಯಾಗಿ ಸುಮಾರು ಎರಡು ವರ್ಷ ಪ್ರಾಯದ ಚಿರತೆ ಮರಿ ಮೃ*ಪಟ್ಟಿದೆ.ನವೆಂಬರ್ 6ರ ರಾತ್ರಿ ಚಿರತೆ ಮರಿ ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬಂದ ವಾಹನ ಅಪ್ಪಳಿಸಿದ್ದು, ತೀವ್ರ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃ*ಪಟ್ಟಿದೆ ಎನ್ನಲಾಗಿದೆ.ಘಟನೆಯ ಮಾಹಿತಿ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ವಿದ್ಯುತ್ ಶಾಕ್‌ಗೆ ಕಾಡಾನೆ ಬಲಿ!

ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಲೈನ್ ಅಳವಡಿಕೆ; ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಘಟನೆ.ಶಿವಮೊಗ್ಗ: ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಲೈನ್ ಅಳವಡಿಸಿದ್ದ ಪರಿಣಾಮ ಕಾಡಾನೆ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದೆ ಎನ್ನಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ತೀರ್ಥಹಳ್ಳಿ: ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ನವೆಂಬರ್ 2, 2026ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಅವರು ಗುಂಡನ್ನು 12.05 ಮೀಟರ್ ದೂರ ಎಸೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತೀರ್ಥಹಳ್ಳಿ: ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ನವೆಂಬರ್ 2, 2026ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಅವರು ಗುಂಡನ್ನು 12.05 ಮೀಟರ್ ದೂರ ಎಸೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಮಿಥಾಲಿ ಅವರು ತಗಡವಳ್ಳಿಯ ಗೀತಾ ಹಾಗೂ ಶಶಿನಾಥ್ ದಂಪತಿಗಳ ಪುತ್ರಿ. ಇವರು ಶೈಕ್ಷಣಿಕವಾಗಿಯೂ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟಗಳ ಜೊತೆಗೆ ದಸರಾ ಕ್ರೀಡಾಕೂಟಗಳಲ್ಲಿಯೂ ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

ತಮ್ಮ ಕ್ರೀಡಾ ಸಾಧನೆಯ ಮೂಲಕ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕು ಹಾಗೂ ವ್ಯಾಸಂಗ ಮಾಡುತ್ತಿರುವ ಶಾಲೆಗೆ ಕೀರ್ತಿ ತಂದಿರುವ ಮಿಥಾಲಿ ಅವರ ಸಾಧನೆಗೆ ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಶುಭ ಹಾರೈಸಿದ್ದಾರೆ.

ತೀರ್ಥಹಳ್ಳಿ :ಮಾರುತಿ ಕ್ರ್ಯಾಕರ್ಸ್ ವತಿಯಿಂದ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು!

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಾರುತಿ ಕ್ರ್ಯಾಕರ್ಸ್ ವತಿಯಿಂದ ಗ್ರಾಹಕರಿಗಾಗಿ ಅತ್ಯುತ್ತಮ ಗುಣಮಟ್ಟದ ವಿವಿಧ ಬಗೆಯ ಪಟಾಕಿಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಹೋಲ್‌ಸೇಲ್ ದರದಲ್ಲಿ ಪಟಾಕಿಗಳು ಲಭ್ಯವಿದ್ದು, ಅತೀ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಪಟಾಕಿಗಳನ್ನು ಖರೀದಿಸುವ ಸದಾವಕಾಶವನ್ನು ಗ್ರಾಹಕರಿಗೆ ಕಲ್ಪಿಸಲಾಗಿದೆ.

ವಿವಿಧ ಬಗೆಯ ಆಕರ್ಷಕ ಪಟಾಕಿಗಳು, ಹಬ್ಬದ ಸಂಭ್ರಮವನ್ನು ಹೆಚ್ಚಿಸುವ ಸಿಡಿಮದ್ದುಗಳು ಒಂದೇ ಸೂರಿನಡಿ ಲಭ್ಯವಿವೆ. ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಳಿಗೆಯ ಮಾಲೀಕರು ತಿಳಿಸಿದ್ದಾರೆಮಳಿಗೆಯ ವಿಳಾಸ:ಮಾರುತಿ ಕ್ರ್ಯಾಕರ್ಸ್,

ನಂ. 9, ಕುವೆಂಪು ರಂಗಮಂದಿರದ ಎದುರು,ಗಡಿಕಲ್ (ಕುಪ್ಪಳ್ಳಿ ಸಮೀಪ).

ಸಂಪರ್ಕಿಸಿ ನಿಶ್ಚಿತ್ ಬಿ.ಆರ್. – 7829090099 ಸುಧಾಕರ್ ಟಿ.ಎಸ್. – 94496 98809

 

ಪರಿಸರ ರಕ್ಷಕರೇ ಭಕ್ಷಕರಾದರೇ?: ಕುಶಾಲನಗರ ಅಂಚೆ ಕಚೇರಿಯಲ್ಲಿ ೭ ಬೃಹತ್ ಮರಗಳ ಮಾರಣಹೋಮ

ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ಸರ್ಕಾರಿ ಅಂಚೆ ಕಚೇರಿ ಆವರಣದಲ್ಲಿ ಅರಣ್ಯ ಇಲಾಖೆಯ ಅನುಮತಿ ಮೀರಿ ಏಳು ಬೃಹತ್ ಮರಗಳನ್ನು ಕಡಿದಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಂಚೆ ಇಲಾಖೆಯ ಮನವಿಯ ಮೇರೆಗೆ ಅರಣ್ಯ ಇಲಾಖೆಯು ಕೇವಲ ಎರಡು ಮರಗಳನ್ನು ಕಡಿಯಲು ಅನುಮತಿ ನೀಡಿ, 2025ರ ಏಪ್ರಿಲ್‌ನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿತ್ತು ಎನ್ನಲಾಗಿದೆ. ಆದರೆ ಅನುಮತಿ ನೀಡಿದ ಎರಡು ಮರಗಳ ಬದಲಾಗಿ ಒಟ್ಟು ಏಳು ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದ್ದು, ಈಗಾಗಲೇ ಮೂರು ಕ್ಯಾಂಟರ್ ಲಾರಿಗಳಲ್ಲಿ ಮರದ ತುಂಡುಗಳನ್ನು ಸಾಗಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿ ಮಧು ಕುಮಾರ್ ಅವರನ್ನು ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಪ್ರಶ್ನಿಸಿದಾಗ, ಕೇವಲ ಎರಡು ಮರಗಳನ್ನು ಕಡಿಯಲು ಮಾತ್ರ ಅನುಮತಿ ನೀಡಿದ್ದು, ಉಳಿದ ಮರಗಳ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ಮುಖಂಡರು, ಅರಣ್ಯ ಇಲಾಖೆಯ ಸಿಬ್ಬಂದಿ ಮೇಲ್ವಿಚಾರಣೆ ಇಲ್ಲದೆ ಇಷ್ಟೊಂದು ಮರಗಳನ್ನು ಕಡಿದು ಸಾಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.ಇದೇ ವೇಳೆ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಅವರನ್ನು ವಿಚಾರಿಸಿದಾಗ, ಮರ ಕಡಿಯುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ಆದೇಶದ ಪ್ರತಿ ತಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಂಚೆ ಇಲಾಖೆಯ ಹಿರಿಯ ಅಧಿಕಾರಿಯೂ ಅಂಚೆ ಇಲಾಖೆಯ ಗಮನಕ್ಕೆ ತರದೆ ಮರಗಳನ್ನು ಕಡಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಕೇವಲ ಎರಡು ಮರಗಳಿಗೆ ಅನುಮತಿ ನೀಡಿ ಉಳಿದ ಐದು ಮರಗಳನ್ನು ಕಡಿದಿರುವ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟ ಟೆಂಡರ್‌ದಾರರು ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಅಂಚೆ ಕಚೇರಿ ಹಾಗೂ ಅರಣ್ಯ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಸ್ವಾಭಿಮಾನಿ ಸೇನೆ ಎಚ್ಚರಿಕೆ ನೀಡಿದೆ.ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ ಮತ್ತು ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್ ಮತ್ತು ಜಿಲ್ಲಾ ಗೌರವಾಧ್ಯಕ್ಷರಾದ ನಂಜಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಮಣಿಕಂಠ ಮತ್ತು ಸಂಘಟನಾ ಕಾರ್ಯದರ್ಶಿ ಖಾಸಿಂ ಮತ್ತು ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಶಿವ ಮತ್ತು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಭವ್ಯ ಮತ್ತು ತಾಲ್ಲೂಕು ಗೌರವಾಧ್ಯಕ್ಷ ರವೀಂದ್ರ ಮತ್ತು ನಗರ ಘಟಕದ ಗೌರವಾಧ್ಯಕ್ಷ ವಿಲ್ಸನ್ ಮತ್ತು ಮಹಿಳಾ ಘಟಕದ ಉಪಾಧ್ಯಕ್ಷೆ ದಿವ್ಯ ಡಿಸೋಜ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಣಗೆರೆ ಸಿರಿಗೆರೆಯಲ್ಲಿ ಅನಾಮಧೇಯ ಶ* ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ

ಶಿವಮೊಗ್ಗ ಜಿಲ್ಲೆ: ಹಣಗೆರೆ ಸಿರಿನಲ್ಲಿ ಬಸ್‌ ನಿಲ್ದಾಣದ ಸಮೀಪದಲ್ಲಿರುವ ಕಾಡಿನಲ್ಲಿ ಅನಾಮಧೇಯ ವ್ಯಕ್ತಿಯ ಮೃ*ದೇಹ ಪತ್ತೆಯಾಗಿದೆ.ಸುಮಾರು ಕೆಲವು ದಿನಗಳ ಹಿಂದೆಯೇ ವ್ಯಕ್ತಿ ಮೃ*ಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮೃತರು ಸುಮಾರು 55 ವರ್ಷ ವಯಸ್ಸಿನ ಪುರುಷ ಎಂದು ತಿಳಿದುಬಂದಿದೆ.

  • ಮೃ* ವ್ಯಕ್ತಿಯ ಗುರುತಿನ ಚಿಹ್ನೆಗಳು
  • ವಯಸ್ಸು: ಸುಮಾರು 55 ವರ್ಷ
  • ಎತ್ತರ: ಸುಮಾರು 5 ಅಡಿ 6 ಇಂಚು
  • ಉಡುಪು: ಬಿಳಿ ಬಣ್ಣದ ಶರ್ಟ್‌ ಜುಬ್ಬಾ ಹಾಗೂ ಬಿಳಿ ಪಂಚೆ
  • ಬಿಳಿ ಬಣ್ಣದ ಟವಲ್
  • ತಲೆಯ ಮೇಲೆ ಬೂದು ಬಣ್ಣದ ಟೋಪಿ
  • ಕಾಲಿನಲ್ಲಿ ಚಪ್ಪಲಿ
  • ಜೇಬಿನಲ್ಲಿ ಎಲೆ-ಅಡಿಕೆ ಕವರ್, ಮಾತ್ರೆಗಳು ಹಾಗೂ ಕನ್ನಡಕ ಪತ್ತೆಯಾಗಿದೆ.

ಪ್ರಸ್ತುತ ಮೃ*ದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ಅಥವಾ ಸಂಬಂಧಿಕರು ಕೂಡಲೇ ಮಾಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

08181235142   —8277982919

ಬೆಳೆ ವಿಮೆಯಲ್ಲಿ ತೀರ್ಥಹಳ್ಳಿ ರೈತರಿಗೆ ಅನ್ಯಾಯ ಆರೋಪ: ಕುಪ್ಪಳ್ಳಿ ಪ್ರಶಾಂತ್ ಅಸಮಾಧಾನ

ತೀರ್ಥಹಳ್ಳಿ: ಬೆಳೆ ವಿಮೆ ಪಾವತಿಯಲ್ಲಿ ತೀರ್ಥಹಳ್ಳಿ ತಾಲೂಕಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಶೇಡ್ಗರು, ಕಟ್ಟೆಹಕ್ಲು, ಹೆದ್ದೂರು ಸೇರಿದಂತೆ ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಅತ್ಯಂತ ಕಡಿಮೆ ಪ್ರಮಾಣದ ವಿಮಾ ಹಣ ಪಾವತಿಸಲಾಗುತ್ತಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಕುಪ್ಪಳ್ಳಿ ಪ್ರಶಾಂತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಬೆಳೆ ವಿಮೆ ಪಾವತಿಯಲ್ಲಿ ಮಳೆ ಮಾಪನದ ಲೆಕ್ಕಾಚಾರವನ್ನು ಆಧಾರವಾಗಿಟ್ಟುಕೊಂಡು ಪರಿಹಾರ ನೀಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉತ್ತರಿಸಿದ್ದಾರೆ. ಆದರೆ, ಸರಿಯಾದ ಮಳೆ ಮಾಪನದ ನಿಖರತೆಯನ್ನು ಪರಿಶೀಲಿಸದೆ ವಿಮಾ ಹಣ ನಿಗದಿಪಡಿಸಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂಬುದು ರೈತರ ಅಳಲಾಗಿದೆ.ವಿಮಾ ಕಂಪನಿಯು ತೀರ್ಥಹಳ್ಳಿ ತಾಲೂಕಿಗೆ ಅನ್ಯಾಯ ಮಾಡುತ್ತಿದೆ ಎಂಬ ಆರೋಪದ ಜೊತೆಗೆ, ಈ ವಿಚಾರದಲ್ಲಿ ತೋಟಗಾರಿಕೆ ಇಲಾಖೆ ಮಧ್ಯಸ್ಥಿಕೆ ವಹಿಸುತ್ತಿದ್ದರೂ ರೈತರ ಸಮಸ್ಯೆಗೆ ಸಮರ್ಪಕ ಪರಿಹಾರ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.“ಸಮೀಕ್ಷೆ ಮಾಡಿಲ್ಲ, ಮಳೆ ಮಾಪನ ಸರಿಯಾಗಿಲ್ಲ. ಇದೆಲ್ಲವೂ ರೈತರಿಗೆ ಮೋಸ ಮಾಡುವ ಹುನ್ನಾರ ಎಂಬ ಅನುಮಾನ ಮೂಡುತ್ತಿದೆ. ಈ ವಿಚಾರದಲ್ಲಿ ತೋಟಗಾರಿಕೆ ಇಲಾಖೆ ಮಧ್ಯಸ್ಥಿಕೆ ವಹಿಸುತ್ತಿದೆ. ಆದರೆ,ಈಗಾಗಲೇ ತೋಟಗಾರಿಕೆ ಇಲಾಖೆ ಮುಂದೆ ಪ್ರತಿಭಟನೆ ನೀಡಿದ್ದರೂ ಯಾವುದೇ ಪರಿಹಾರ ದೊರೆತಿಲ್ಲ ಜೊತೆಗೆ ಯಾರನ್ನು ನಂಬಬೇಕು ಎಂಬುದೇ ಯಕ್ಷಪ್ರಶ್ನೆಯಾಗಿದೆ. ಜಿಲ್ಲಾಧಿಕಾರಿಗಳು ಕೂಡಲೇ ಈ ಬಗ್ಗೆ ಸಮಗ್ರ ವರದಿ ಪಡೆದು, ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ಕುಪ್ಪಳ್ಳಿ ಪ್ರಶಾಂತ್ ಮನವಿ ಮಾಡಿದ್ದಾರೆ.

Read More ಬೆಳೆ ವಿಮೆಯಲ್ಲಿ ತೀರ್ಥಹಳ್ಳಿ ರೈತರಿಗೆ ಅನ್ಯಾಯ ಆರೋಪ: ಕುಪ್ಪಳ್ಳಿ ಪ್ರಶಾಂತ್ ಅಸಮಾಧಾನ

ತೀರ್ಥಹಳ್ಳಿ :ತುಂಗಾ ನದಿಯಲ್ಲಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃ** ಪತ್ತೆ!

ತೀರ್ಥಹಳ್ಳಿಯ ಬಾಳೆಬೈಲು ಪಾರ್ಕ್ ಸಮೀಪ ತುಂಗಾ ನದಿಯಲ್ಲಿ ನೀರುಪಾಲಾಗಿದ್ದ ದಾವಣಗೆರೆ ಮೂಲದ ಇಬ್ಬರು ಯುವಕರ ಮೃ**ದೇ**ಗಳು ಪತ್ತೆಯಾಗಿವೆ.ಶಿವು (22) ಹಾಗೂ ರುದ್ರೇಶ್ (24) ಮೃತ ಯುವಕರು. ಈಜಲು ನದಿಗೆ ತೆರಳಿದ್ದ ಐವರ ತಂಡದ ಇಬ್ಬರು ಯುವಕರು ನೀರುಪಾಲಾಗಿದ್ದರು. ಇದೀಗ ಇಬ್ಬರ ಮೃತದೇಹಗಳೂ ಪತ್ತೆಯಾಗಿವೆ.ಈವೇಳೆ ನಿರಂತರ ಹುಡುಕಾಟದಲ್ಲಿದ್ದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಪೊಲೀಸ್,ಅಗ್ನಿಶಾಮಾಕ ಸಿಬ್ಬಂದಿಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Read More ತೀರ್ಥಹಳ್ಳಿ :ತುಂಗಾ ನದಿಯಲ್ಲಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃ** ಪತ್ತೆ!